ಜಿಲ್ಲೆ

ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್​ ಚಕ್ರತೀರ್ಥರನ್ನು ಕೈಬಿಟ್ಟ ಸರ್ಕಾರ

suchetana

ಬೆಂಗಳೂರು: ಬಹು ವಿವಾದ ಸೃಷ್ಟಿಸಿರುವ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ಚಿಂತಕ ರೋಹಿತ್​ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನೆಲೆಯಲ್ಲಿ ‘ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಸರ್ಕಾರ ಮುಂದಾಗಿದೆ ಎಂದು ಸಚಿವ ನಾಗೇಶ್​ ತಿಳಿಸಿದ್ದಾರೆ.

ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 3 ರಂದು ವಿಸರ್ಜಿಸಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿಗಳು, 'ಪಠ್ಯ ಪರಿಷ್ಕರಣೆಯ ಕ್ರಮಗಳ ಬಗ್ಗೆ ಎದ್ದಿರುವ ವಿವಾದಗಳ ಕಾರಣಕ್ಕೆ ಅಥವಾ ಯಾವುದೇ ಒತ್ತಡಕ್ಕೆ ಮಣಿದು ಈ ಸಮಿತಿಯನ್ನು ವಿಸರ್ಜಿಸುತ್ತಿಲ್ಲ' ಎಂದು ಸ್ಪಷ್ಟಪಡಿಸಿದ್ದರು. ‘ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ’ ಎಂದೂ ಅವರು ಹೇಳಿದ್ದರು.