ಸಾಂದರ್ಭಿಕ ಚಿತ್ರ 
ಜಿಲ್ಲೆ

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆ- ಸರ್ಕಾರದ ಆದೇಶ ಯಾರ‍್ಯಾರಿಗೆ ಎಷ್ಟೆಷ್ಟು?

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೂಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಂಡು ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ತಣದಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರಸ್ತುತ 7,500 ರೂ. ಇದ್ದ ಗೌರವಧನವನ್ನು 10 ಸಾವಿರ ರೂ.ಗಳಿಗೆ ಹಾಗೂ ಸರ್ಕಾರಿ ಪ್ರೌಢಶಾಲೆ ಶಿಕ್ಷಕರಿಗೆ ಇದ್ದ 8,000 ರೂ. ಗೌರವ ಧನವನ್ನು 10,500 ರೂ.ಗಳಿಗೆ ಹೆಚ್ಚಿಸಲಾಗಿದೆ.

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಆರು ವರ್ಷಗಳಿಂದ ಪರಿಷ್ಕರಿಸಿರಲಿಲ್ಲ.