ಜಿಲ್ಲೆ

ನಾಳೆಯಿಂದ ಮೂರು ವಾರ ಶಾಲೆಗಳಿಗೆ ರಜೆ ಘೋಷಣೆ

suchetana

ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಮೂರು ವಾರಗಳ ರಜೆ ಘೋಷಿಸಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಆದೇಶಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ಅಂದರೆ ಅ.30ರವೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ.

ವಿದ್ಯಾಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಪೈಕಿ ಅನೇಕ ಮಂದಿಗೆ ಸೋಂಕು ದೃಢಪಟ್ಟಿದ್ದರಿಂದ ಕಾರ್ಯಕ್ರಮವನ್ನು ಇದಾಗಲೇ ಸ್ಥಗಿತಗೊಳಿಸಲಾಗಿದೆ. ಇದೀಗ ಎಲ್ಲಾ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ.

ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ಅಂದರೆ ಅ.30ರವೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶದಲ್ಲಿ ತಿಳಿಸಿದ್ದಾರೆ.

ಶನಿವಾರ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೋವಿಡ್ ಸಮಸ್ಯೆ ಹೆಚ್ಚಾಗಿರುವ ಈ ಕಾಲಘಟ್ಟದಲ್ಲಿ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಹಾಗೂ ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದರು. ಅವರ ಒತ್ತಾಯಕ್ಕೆ ಮಣಿದಿರುವ ಸರ್ಕಾರ ನಿನ್ನೆ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶಿಸಿತ್ತು. ಇಂದು ಸರ್ಕಾರ ಎಲ್ಲಾ ಶಿಕ್ಷಕರಿಗೆ ರಜೆ ಘೋಷಿಸಿ ಆದೇಶಿಸಿದೆ.