ಜಿಲ್ಲೆ

ಶಿರಾ ಉಪಚುನಾವಣೆ- ಜೆಡಿಎಸ್​ನಿಂದ ಅಮ್ಮಾಜಮ್ಮ

suchetana

ಶಿರಾ: ತುಮಕೂರು ಜಿಲ್ಲೆಯ ಶಿರಾ ಉಪಚುನಾವಣೆಗೆ ಜೆಡಿಎಸ್​ನಿಂದ ನಿರೀಕ್ಷೆಯಂತೆ ಅಮ್ಮಾಜಮ್ಮ ಅವರಿಗೆ ಟಿಕೆಟ್​ ಘೋಷಣೆ ಮಾಡಲಾಗಿದೆ.

ಜೆಡಿಎಸ್​ ಮುಖಂಡ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ. ಸತ್ಯನಾರಾಯಣ್ ಪುತ್ರ ಸತ್ಯಪ್ರಕಾಶ್ ಹೆಸರು ಆಕಾಂಕ್ಷಿಗಳ ಸಾಲಿನಲ್ಲಿ ಕೇಳಿ ಬಂದಿತ್ತು, ಆದರೆ ಅಂತಿಮವಾಗಿ ಕ್ಷೇತ್ರದ ಮುಖಂಡರ ಅಭಿಪ್ರಾಯದಂತೆ ಅಮ್ಮಾಜಮ್ಮ ಅವರಿಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಸೋಮವಾರ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಕಾರ್ಯಕರ್ತರ ಸಭೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಿಸುತ್ತಿದ್ದು, ಅದಕ್ಕೂ‌ ಮುನ್ನ ಬೆಂಗಳೂರಿನಲ್ಲಿ ಅಭ್ಯರ್ಥಿ ಘೋಷಿಸುವ ಸಾಧ್ಯತೆ ಇದೆ. ಅಥವಾ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಹೆಸರು ಘೋಷಿಸುವ ನಿರೀಕ್ಷೆಯಿದೆ.

ಈ ನಡುವೆ, ಬಿಜೆಪಿಯಿಂದ ಮಾಜಿ ಸಂಸದ ಸಿ.ಪಿ ಮೂಡಲಗಿರಿಯಪ್ಪ ಪುತ್ರ ಡಾ.ರಾಜೇಶ್ ಗೌಡ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.