ಜಿಲ್ಲೆ

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ: ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7ರಷ್ಟು ಹೆಚ್ಚಳ

suchetana

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಮಂಡನೆ ಮಾಡುತ್ತಿದ್ದಾರೆ. ಈ ಬಾರಿ ಪಂಚಸೂತ್ರದ ಅಡಿಯಲ್ಲಿ ಬಜೆಟ್​ ಘೋಷಣೆ ಮಾಡಿರುವುದಾಗಿ ಅವರು ಹೇಳಿದ್ದಾರೆ.

ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳ ಆಗಿರುವುದಾಗಿ ಸಿಎಂ ಹೇಳಿದ್ದಾರೆ.

ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ. ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ ಹಾಗೂ ಸೇವಾ ವಲಯ – ಪಾಲುದಾರಿಕೆಯೊಂದಿಗೆ ಅಭಿವೃದ್ಧಿ, ನವಭಾರತಕ್ಕಾಗಿ ನವ ಕರ್ನಾಟಕ – ಹೊಸ ಚಿಂತನೆ, ಹೊಸ ಚೈತನ್ಯದ ಜತ ಹೊಸ ಮುನ್ನೋಟಕ್ಕೆ ಒತ್ತು ನೀಡಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಬಜೆಟ್​ನ ನೇರ ಪ್ರಸಾರಕ್ಕೆ ಇಲ್ಲಿ ಕ್ಲಿಕ್ಕಿಸಿ: