ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಕುಂದಾಪುರ ವಲಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿಯ ಪ್ರೌಢಶಾಲಾ ವಿಭಾಗದಲ್ಲಿ ಎಸ್.ವಿ ಆಂಗ್ಲ ಮಾಧ್ಯಮ ಶಾಲೆ ಬಾಲಕ- ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ಎಸ್.ವಿ ಆಂಗ್ಲ ಮಾಧ್ಯಮ ಶಾಲೆ ಬಾಲಕರ ತಂಡ ಕೆಪಿಎಸ್ ಕೋಟೇಶ್ವರ ತಂಡವನ್ನು ಸೋಲಿಸಿದರೆ, ಬಾಲಕಿಯರ ತಂಡ ಕುಂದಾಪುರದ ಸೇಂಟ್ ಪಿಯೂಸ್ ಶಾಲೆ ತಂಡವನ್ನು ಸೋಲಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕುಂದಾಪುರದ ಸೇಂಟ್ ಪಿಯೂಸ್ ಶಾಲೆ ಬಾಲಕರ ತಂಡ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವನ್ನು ಸೋಲಿಸಿದರೆ, ಹಳ್ನಾಡು ತುಳಸೀ ವಿದ್ಯಾ ಮಂದಿರ ಬಾಲಕಿಯರ ತಂಡ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಬಾಲಕಿಯರ ತಂಡವನ್ನು ಸೋಲಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
14 ವರ್ಷ ಕೆಳಗಿನ ಬಾಲಕರ ವಿಭಾಗದಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಆರ್ಯನ್ ವಿ.ಕೆ. ಮತ್ತು ಬಾಲಕಿಯರ ವಿಭಾಗದಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಮಾನ್ವಿತಾ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ವಿಜಯಾ ಆರ್.ಪೈ, ಶಾಲೆ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಪತ್ರಕರ್ತ ಬಿ.ರಾಘವೇಂದ್ರ ಪೈ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್, ದೀಕ್ಷಿತ್ ಮೇಸ್ತ, ಲಾವಣ್ಯ ಉಪಸ್ಥಿತರಿದ್ದರು. ಸಹಶಿಕ್ಷಕಿಯರಾದ ರೇಷ್ಮಾ ನಾಯಕ್ ಸ್ವಾಗತಿಸಿದರು. ಸಂಗೀತಾ ಕಾರ್ಯಕ್ರಮ ನಿರ್ವಹಿಸಿದರು. ಉಷಾ ವಂದಿಸಿದರು.