ಜಿಲ್ಲೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಡಾ.ಎಂ. ಪಿ.ಶ್ರೀನಾಥ್ ಮನವಿ

Mangaluru - Hariprasad Rai


ಮಂಗಳೂರು : ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಹಿತ್ಯಾಸಕ್ತರು, ಕನ್ನಡ ಪರ ಸಂಘಟನೆಗಳ ಸದಸ್ಯರು ಭಾಗವಹಿಸಬೇಕು ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್
ಅಧ್ಯಕ್ಷ ಡಾ.ಎಂ. ಪಿ.ಶ್ರೀನಾಥ್ ಮನವಿ ಮಾಡಿದರು.
ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ
ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ ಸಮ್ಮೇಳನಕ್ಕೆ ಜಿಲ್ಲೆಯಿಂದ ಭಾಗವಹಿಸುವವರು ನಿಗದಿತ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿದಿ ಹಾಜರಾಗಬಹುದು ಎಂದರು
ಸಮ್ಮೇಳನದಲ್ಲಿ ನಡೆಯುವ ಸನ್ಮಾನಕ್ಕೆ ಅರ್ಹ ಸಾಧಕರನ್ನು ಮತ್ತು ಕವಿಗೋಷ್ಠಿಗೆ ಕವಿಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸಾಹಿತ್ಯ ಚಟುವಟಿಕೆಗಳಿಗೆ ಸಹಕಾರಿ ಸಂಘದ ಸಭಾ ಭವನ ನೀಡಲು ಸಹಕಾರ ಸಂಘದ ಅಧ್ಯಕ್ಷರನ್ನು ವಿನಂತಿಸಲಾಗುವುದು.
ಉಜಿರೆಯಲ್ಲಿ ಜರಗಿದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಸಾಹಿತ್ಯ ಪರಿಷತ್‌ನ ರಾಜ್ಯ ಸಮಿತಿ ಸದಸ್ಯ ಡಾ.ಎಂ.ಕೆ. ಮಾಧವ, ಸಹಕಾರ ಸಂಘದ ಅಧ್ಯಕ್ಷ ಗಣೇಶ್ ರಾವ್, ಕಸಾಪ ಸಹ ಸಂಘಟನಾ ಕಾರ್ಯದರ್ಶಿ ಕಿರಣ್ ರೈ, ಕೋಶಾಧ್ಯಕ್ಷ ಬಿ.ಐತಪ್ಪ ನಾಯ್ಕ, ವಿವಿಧ ತಾಲೂಕು ಘಟಕದ ಅಧ್ಯಕ್ಷರುಗಳಾದ ಪುತ್ತೂರು ಉಮೇಶ್ ನಾಯಕ್, ವೇಣುಗೋಪಾಲ ಶೆಟ್ಟಿ, ಧನಂಜಯ ಕುಂಬ್ಳೆ, ಚಂದ್ರಶೇಖರ ಪೇರಾಲು, ಯದುಪತಿ ಗೌಡ, ಪದಾಧಿಕಾರಿಗಳಾದ ರಾಮಚಂದ್ರ ಪಲ್ಲತಡ್ಕ, ಪೂವಪ್ಪ ನೇರಳಕಟ್ಟೆ, ಕೆ ಸುಂದರ ನಾಯ್ಕ,ಸನತ್ ಕುಮಾರ್ ಜೈನ್, ಅರುಣಾ ನಾಗರಾಜ್ ಉಪಸ್ಥಿತರಿದ್ದರು.
ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಯು. ಎಚ್. ಖಾಲಿದ್ ಉಜಿರೆ ಸ್ವಾಗತಿಸಿ, ಗೌರವ ಕಾರ್ಯದರ್ಶಿ ರಾಜೇಶ್ವರಿ ವಂದಿಸಿದರು.