ಜಿಲ್ಲೆ

ಜು.26ರಂದು ‘ಸಾಂಕೇತ್’ ಕನ್ನಡ ಸಿನೆಮಾ ಬಿಡುಗಡೆ

Mangaluru - Hariprasad Rai




ಮಂಗಳೂರು : ವ್ಯಕ್ತಿಗಳು ಎದುರಿಸುವ ಸಾಮಾಜಿಕ ಹಾಗೂ ಮಾನಸಿಕ ಒತ್ತಡಗಳನ್ನು ಆಧಾರವಾಗಿರಿಸಿ, ಮದುವೆ-ಮಕ್ಕಳ ವಿಷಯದ ತೊಳಲಾಟ ಬಿಂಬಿಸುವ ವಿಭಿನ್ನ ಶೈಲಿಯ ‘ಸಾಂಕೇತ್’ ಕನ್ನಡ ಸಿನೆಮಾ ಜು.26ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಇದೊಂದು ಕನ್ನಡದ ವಿಭಿನ್ನ ಪ್ರಯತ್ನ. ತನ್ನ ಜೀವನವು ಮದುವೆ ಆಗಿ ಮಕ್ಕಳನ್ನು ಹೊಂದಿದಾಗ ಮಾತ್ರ ಪೂರ್ಣವಾಗುತ್ತದೆ ಎಂದು ಒಬ್ಬ ಯುವಕ ನಂಬಿರುತ್ತಾನೆ. ಆದರೆ ಮದುವೆಯ ಕೆಲವು ವರ್ಷಗಳ ನಂತರ ಮಕ್ಕಳನ್ನು ಹೊಂದುವ ಯಾವುದೇ ವಿಧಾನ ಲ ನೀಡದಾಗ ತಲ್ಲಣಗೊಂಡ ವ್ಯಕ್ತಿ ಅಸಾಂಪ್ರದಾಯಿಕ ವಿಧಾನ ಪರಿಶೀಲಿಸಲು ಹೊರಡುತ್ತಾನೆ. ತನ್ನ ಸುತ್ತಲಿನ ಪ್ರತಿಯೊಬ್ಬರ ಜೀವನವನ್ನು ಯಾವ ರೀತಿ ಅಪಾಯಕ್ಕೆ ಸಿಲುಕಿಸುತ್ತಾನೆ ಎಂಬುದನ್ನು ಆಧಾರವಾಗಿಸಿ ಸಿನೆಮಾ ಮಾಡಲಾಗಿದೆ ಎಂದು ಸಿನೆಮಾದ ನಿರ್ದೇಶಕಿ ಜ್ಯೋತ್ಸ್ನಾ ಕೆ.ರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಟಿ ಚೈತ್ರ ಶೆಟ್ಟಿ ಮಾತನಾಡಿ ಧ್ವನಿ ವಿನ್ಯಾಸ ಹಾಗೂ ನಿರ್ದೇಶನವನ್ನು ಜ್ಯೋತ್ಸ್ನಾ ಕೆ.ರಾಜ್ ನಿರ್ವಹಿಸಿದ್ದಾರೆ. ವಿಕ್ಕಿ ರಾವ್, ಮೋಹನ್ ಶೇಣಿ, ರೂಪಶ್ರೀ ವರ್ಕಾಡಿ, ರಾಹುಲ್ ಅಮೀನ್, ನಿರೀಕ್ಷಾ ಶೆಟ್ಟಿ, ಸದಾಶಿವ ಅಮೀನ್, ನಿರೀಕ್ಷಾ ರಾಣಿ, ರಜೀತ್ ಕದ್ರಿ, ಮೇಘನಾ ರಕ್ಷಿತಾ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದ ಟ್ರೈಲರ್ ಈಗಾಗಲೇ ಗಮನಸೆಳೆದಿದೆ. ಹಾಗಾಗಿ ಸಿನೆಮಾದ ಬಗ್ಗೆ ಭಾರೀ ನಿರೀಕ್ಷೆ ಇದೆ
ಎಂದರು. ನಟ ರಾಹುಲ್ ಅಮೀನ್, ವಿಕ್ಕಿ ರಾವ್, ಸನತ್ ಕುಮಾರ್, ಪ್ರಕಾಶ್ ರಾವ್ ಉಪಸ್ಥಿತರಿದ್ದರು.