ಜಿಲ್ಲೆ

83 ಗ್ರಾಮಗಳ ಮನೆಗಳಿಗೆ ನಲ್ಲಿ ಸಂಪರ್ಕ ; ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ನಿರ್ಣಯ

Tumakuru

ತುಮಕೂರು : ಜಲಜೀವನ್ ಮಿಷನ್ ಯೋಜನೆಯಡಿ ಸುಸ್ಥಿರ ಜಲಮೂಲ ಹೊಂದಿರುವ 83 ಗ್ರಾಮಗಳ ಮನೆಗಳಿಗೆ ನಳ (ನಲ್ಲಿ) ಸಂಪರ್ಕ ಕಲ್ಪಿಸಲು ಜಿಪಂ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಜಿಪಂ ಸಭಾಂಗಣದಲ್ಲಿ ಸಿಇಒ ಡಾ.ಕೆ.ವಿದ್ಯಾಕುವಾರಿ ಅಧ್ಯಕ್ಷತೆಯಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ, ಜಿಲ್ಲೆಯಲ್ಲಿ 7 ಬಹುಗ್ರಾಮ ಕುಡಿಯುವ ನೀರು ಯೋಜನೆ ಮೂಲಕ 83 ಸುಸ್ಥಿರ ಜಲಮೂಲ ಹೊಂದಿರುವ ಗ್ರಾಮಗಳ ಪ್ರತಿ ಮನೆ ಮನೆಗೂ 24/7 ನೀರು ಒದಗಿಸಲು ಕಾರ್ಯಾತ್ಮಕವಾಗಿ ನಳ ಅಳವಡಿಕೆ ಕ್ರಿಯಾ ಯೋಜನೆಗೆ ಒಪ್ಪಿಗೆ ತೆಗೆದುಕೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಯಿತು.

ಕೆ.ವಿದ್ಯಾಕುವಾರಿ ವಾತನಾಡಿ, ನಳ ಅಳವಡಿಕೆಗೆ ಗುರುತಿಸಿರುವ ಹಳ್ಳಿಗಳಲ್ಲಿ ಶೇ.100 ನಲ್ಲಿ ಅಳವಡಿಸಬೇಕು. ನಮ್ಮ ಮನೆಗೆ ಅಳವಡಿಸಿಲ್ಲ ಎಂಬ ದೂರುಗಳು ಬರದಂತೆ ಕಾರ್ಯಕ್ರಮ ಯಶಸ್ವಿಯಾಗಬೇಕು ಎಂದು ಇಂಜಿನಿಯರ್‌ಗಳಿಗೆ ಸೂಚಿಸಿದರು.

ಮುಂದಿನ ದಿನಗಳಲ್ಲಿ ನೀರಿನ ಮೂಲ ಹೆಚ್ಚಿಸಬೇಕು, ಆ ನಿಟ್ಟಿನಲ್ಲಿ ಜಿಲ್ಲೆಯ ಕೆರೆಗಳ ಪುನರುಜ್ಜೀವನ ಕಾರ್ಯಕ್ರಮಕ್ಕೂ ಹೆಚ್ಚಿನ ಆದ್ಯತೆ ಕೊಡಬೇಕು. ನೀರಿನ ಮಟ್ಟ ವೃದ್ಧಿಯಾದರೆ ಜಲಮೂಲ ಲಭ್ಯವಾಗಲಿದೆ ಎಂದರು.

ಜಿಪಂ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ವಾತನಾಡಿ, ಗ್ರಾಮೀಣ ಭಾರತದ ಎಲ್ಲ್ಲ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವ ಮೂಲಕ ಸುರಕ್ಷಿತ ಕುಡಿವ ನೀರು ಒದಗಿಸುವ ಮಹತ್ತರ ಉದ್ದೇಶ ಈಡೇರಬೇಕು ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತ ಕೆ.ಮುತ್ತಪ್ಪ ಹಾಗೂ ಸಹಾಯಕ ಅಭಿಯಂತರಾದ ಮಮತಾ ವಾತನಾಡಿ, ಜಿಲ್ಲೆಯಲ್ಲಿ 7 ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಮೂಲಕ ಯಾವ್ಯಾವ ಗ್ರಾಮಗಳಿಗೆ ಎಷ್ಟು ನಳ ಅಳವಡಿಸಲಾಗುವುದು. ಸುಸ್ಥಿರ ನೀರಿನ ಮೂಲ ಹೇಗೆ ಎಂಬುದರ ವರದಿ ಮಂಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ, ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನ, ತುಮಕೂರು ವಿಭಾಗೀಯ ಅರಣ್ಯಾಧಿಕಾರಿ ಡಿ.ಎನ್.ನಾಗರಾಜು, ಜಿಲ್ಲಾ ಯೋಜನಾ ವ್ಯವಸ್ಥಾಪಕ ಅರುಣ್ ಇದ್ದರು.

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ: ಕೃಷಿ ಇಲಾಖೆಯು ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಂದ ಕೃಷಿ ಪಂಡಿತ ಪ್ರಶಸ್ತಿಗೆ ನಾಮ ನಿರ್ದೇಶನ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಕೃಷಿಗೆ ಸಂಬಂಧಿಸಿದ ಸಂಶೋಧನೆ, ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಅಲ್ಲದೆ ಅವರ ಸಂಶೋಧನೆ, ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟಿದ್ದು, ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ನಿಗದಿತ ಅರ್ಜಿ ನಮೂನೆಯಲ್ಲಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಜು.20 ರೊಳಗೆ ಸಲ್ಲಿಸಬಹುದು. ವಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ.