ಜಿಲ್ಲೆ

ಕೋಟ ಸಹಕಾರಿ ವ್ಯವಸಾಯಕ ಸಂಕ್ಕೆ ಸಾಧನಾ ಪ್ರಶಸ್ತಿ

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಕ್ಕೆ ಅಪೆಕ್ಸ್ ಬ್ಯಾಂಕಿನ ರಾಜ್ಯಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿ ಲಭಿಸಿದೆ. ಸಂದ ಅತ್ಯುತ್ತಮ ಕಾರ್ಯ ವೈಖರಿ ಮತ್ತು ಸರ್ವಾಂಗೀಣ ಅಭಿವೃದ್ಧಿ ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಈ ಗೌರವ ನೀಡಿದೆ.

ಬೆಂಗಳೂರಿನಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅವರು ಕೋಟ ಸಹಕಾರಿ ವ್ಯವಸಾಯಕ ಸಂ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಮತ್ತು ಸಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುವಾರ್ ಶೆಟ್ಟಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುವಾರ್, ಸಂದ ನಿಕಟಪೂರ್ವ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ನಿರ್ದೇಶಕ ಮಹೇಶ ಶೆಟ್ಟಿ ಮತ್ತು ಗಣ್ಯರು ಉಪಸ್ಥಿತರಿದ್ದರು.