ಮಡಿಕೇರಿ
ಟಿ.ಎ. ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ತೊರೆನೂರು ಗ್ರಾಮದ ಸಾಗರ್ ತೊರೆನೂರು ನೇಮಕ ಆಗಿದ್ದಾರೆ.
ವೇದಿಕೆಯ ರಾಜ್ಯ ಸಂಚಾಲಕಿ ದೀಪಾ ಪೂಜಾರಿ ಈ ನೇಮಕ ಮಾಡಿದ್ದಾರೆ. ವೇದಿಕೆ ವತಿಯಿಂದ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶ ಪ್ರತಿ ನೀಡಿ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.