ಜಿಲ್ಲೆ

ನಮ್ಮ ಸಂಸ್ಕೃತಿ ಬಿಂಬಿಸುವ ರಂಗೋಲಿ

ತರೀಕೆರೆ: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಪಟ್ಟಣದ ಪ್ರವಾಸಿಮಂದಿರ ಆವರಣದಲ್ಲಿ ಏರ್ಪಡಿಸಿದ್ದ ಕನ್ನಡ ಭೂಪಟದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು ಚಿತ್ತಾಕರ್ಷಕ ರಂಗೋಲಿ ಬಿಡಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ದಳವಾಯಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ನಮ್ಮ ಸಂಸ್ಕೃತಿ ಬಿಂಬಿಸುವ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು ಆಸಕ್ತಿವಹಿಸಿ ಪಾಲ್ಗೊಂಡಿದ್ದಾರೆ. ತೀರ್ಪುಗಾರರು ನ್ಯಾಯಸಮ್ಮತವಾಗಿ ತೀರ್ಪು ಪ್ರಕಟಿಸುವ ವಿಶ್ವಾಸವಿದೆ. ವಿಜೇತರಿಗೆ ನ.1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು. ಉಮಾ ಮತ್ತು ಲತಾ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಸದಸ್ಯ ಬಿ.ಎಸ್.ಭಗವಾನ್, ಪ್ರಧಾನ ಕಾರ್ಯದರ್ಶಿ ತ.ಮ.ದೇವಾನಂದ್, ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಮತ್ತಿತರರಿದ್ದರು.