ಜಿಲ್ಲೆ

ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಹಿರಿಯ ಶ್ರೀಗಳು ಲಿಂಗೈಕ್ಯ! Salur Mutt

Salur Mutt : ಮಲೆ ಮಹದೇಶ್ವರ ಬೆಟ್ಟದ ಇತಿಹಾಸ ಪ್ರಸಿದ್ಧ ಶ್ರೀ ಸಾಲೂರು ಬೃಹನ್ಮಠದ ಹಿರಿಯ ಶ್ರೀಗುರುಸ್ವಾಮಿ(75) ಇಂದು ಮುಂಜಾನೆ ಲಿಂಗೈಕ್ಯರಾದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇದ್ದ ಕಾರಣ ಶ್ರೀಮಠಕ್ಕೆ ಮರಳಿ ಕರೆತರಲಾಗಿತ್ತು. ಇಂದು ಮುಂಜಾನೆ ನಿಧನರಾದರು.

ಸುತ್ತೂರು ಶ್ರೀಗಳು, ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಅಂತಿಮ ವಿಧಿವಿಧಾನಗಳು, ಪೂಜಾ ಕಾರ್ಯಗಳು ನಡೆಯಲಿವೆ. ಸಂಜೆ 5 ಗಂಟೆಗೆ ಶ್ರೀಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.