ಜಿಲ್ಲೆ

ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಹಿರಿಯರಿಗೆ ನಮನ

ಆದರ್ಶ್. ಎಂ.ಕೆ.

ಮಡಿಕೇರಿ: ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು.


ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ಬುಧವಾರ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು.


ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು. ಆದಿಮಸಂಜಾತ ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್‌ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು. ಕೊಡವ ಸಾಂಪ್ರದಾಯಿಕ ಸಂಸ್ಕಾರ ಗನ್ ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು ಎಂಬ ಒತ್ತಾಯವನ್ನು ಮುಂದಿಟ್ಟುಕೊಂಡು ಕಳೆದ ಅನೇಕ ವರ್ಷಗಳಿಂದ ಸಿಎನ್‌ಸಿ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ. ಈ ಹಕ್ಕುಗಳು ಶೀಘ್ರ ಈಡೇರಲಿ ಎಂದು ಹಿರಿಯರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.


ಈ ಸಂದರ್ಭದಲ್ಲಿ ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪಂಡ ಮನೋಜ್, ಚೀಯಬೇರ ಸತೀಶ್, ಆಲಮಂಡ ನೆಹರು ಹಾಗೂ ಅಪ್ಪಾರಂಡ ಪ್ರಕಾಶ್ ಅವರುಗಳು ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.