ಗದಗ: ಭಾರತ್ ಸರ್ಕಾರ್, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ, ಗದಗ ಹಾಗೂ ಆದರ್ಶ ಶಿಕ್ಷಣ ಸಮಿತಿಯ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಕಾಮರ್ಸ್ ನ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮವನ್ನು ಸುವರ್ಣ ಮಹೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಗದಗ ಜಿಲ್ಲೆ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರದ ಕಾನೂನು ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವ ಡಾ ಎಚ್ ಕೆ ಪಾಟೀಲ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಕಾಮರ್ಸ್ ಕಾಲೇಜ್ ವಿದ್ಯಾರ್ಥಿಗಳು ಯುವ ಉತ್ಸವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎರಡನೇ ಬಾರಿಗೆ ಸಮಗ್ರ ವೀರಾಗ್ರಹಣಿ ಪ್ರಶಸ್ತಿಯನ್ನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಕಳೆದ ಮೂರು ವರ್ಷಗಳಿಂದ ಕರ್ನಾಟಕ ವಿಶ್ವವಿದ್ಯಾಲಯ ನಡೆಸುವ ಯುವಜನೋತ್ಸವದಲ್ಲಿ ಸತತ ಮೂರು ವರ್ಷ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗಳಿಸಿದ ಜಿಲ್ಲೆಗೆ ಕೀರ್ತಿ ತಂದಿದೆ ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಉತ್ಸವ -2023 ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ ವಿ ಕುಷ್ಟಗಿ ಚೇರ್ಮನ್ ಶ್ರೀ ಆನಂದ್ ಪೋತ್ನಿಸ್ ಉಪಾಧ್ಯಕ್ಷರಾದ ಶ್ರೀ ಪಿ ಆರ್ ಅಡವಿ, ಶ್ರೀ ಜಿ ವಿ ಬಳಗಾನೂರ, ಕಾರ್ಯದರ್ಶಿಗಳಾದ ಶ್ರೀ ಎ ಡಿ ಗೋಡಕಿಂಡಿ, ಸಹ ಕಾರ್ಯದರ್ಶಿಗಳಾದ ಶ್ರೀ ಎಸ್ ಜಿ ಬೆನಕನಹಾಳ, ಖಜಾಂಚಿ ಶ್ರೀ ಮುಕುಂದ್ ಪೋತ್ನಿಸ್ ಹಾಗೂ ಆದರ್ಶ ಶಿಕ್ಷಣ ಸಮಿತಿಯ ಸರ್ವ ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಕೆ ಗಿರಿರಾಜ ಕುಮಾರ್, ಉಪ ಪ್ರಾಚಾರ್ಯರು ಹಾಗೂ ಆಯ್ಕೆ ಐ ಕ್ಯೂ ಎ ಸಿ ಕೋ-ಆರ್ಡಿನೇಟರ್ ಡಾ.ವಿ ಟಿ ನಾಯ್ಕರ್. ಮಹಾವಿದ್ಯಾಲಯದ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗದವರು ಸ್ಪರ್ದಾಳುಗಳಿಗೆ ಹಾಗೂ ತಂಡದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.