ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕೆ.ಇ. ಬೋರ್ಡ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿ ಸಮರ್ಥ ಉಮರ್ಜಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮರು ಮೌಲ್ಯ ಮಾಪನದಲ್ಲಿ 625ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಮೊದಲು ಪ್ರಕಟವಾದ ಫಲಿತಾಂಶದಲ್ಲಿ ಸಮರ್ಥ 625 ಕ್ಕೆ 619 ಅಂಕ ಪಡೆದಿದ್ದ. ನಂತರ ಮರು ಮೌಲ್ಯಮಾಪನದಲ್ಲಿ ಗಣಿತಕ್ಕೆ 80 (ಮೊದಲು 76), ಇಂಗ್ಲಿಷ್ 79 (78) ಅಂಕ ಪಡೆದು ಜಿಲ್ಲೆಗೆ ಪ್ರಥಮ ಮತ್ತು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ.