ಜಿಲ್ಲೆ

ನ.೧೦ರಂದು ಮರಾಟಿಗರ ಸಮಾವೇಶ ಗದ್ದಿಗೆ - ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ - ಸ್ಮರಣ ಸಂಚಿಕೆ ಬಿಡುಗಡೆ

Mangaluru - Nishantha Narayana

ಪುತ್ತೂರು: ಕರ್ನಾಟಕದಲ್ಲಿ ಸುಮಾರು ೩ ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ. ೧೦ರಂದು ’ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮರಾಠಿ ಸಮಾಜ ಸೇವಾ ಸಂಘದ ಪ್ರಸಕ್ತ ಅಧ್ಯಕ್ಷ ಸಿ.ಎನ್.ದುರ್ಗಪ್ಪ ನಾಯ್ಕ ಹೇಳಿದರು.

ಗುಡ್ಡಗಾಡಿನಲ್ಲಿ ವಾಸಿಸುತ್ತಿರುವ ಮರಾಟಿ ಸಮುದಾಯದ ಶೇ.೮೦ರಷ್ಟು ಜನ ಇಂದಿಗೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಅನೇಕ ಸಮಸ್ಯೆಗಳನ್ನು ಹಾಗೂ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಹಾಗೂ ನಮ್ಮ ಸಂಸ್ಕೃತಿ, ಆಚರಣೆಗಳನ್ನು ಅನಾವರಣ ಮಾಡುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಸುಮಾರು ೨೦ ಸಾವಿರ ಭಾಗವಹಿಸುವವರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾವೇಶವನ್ನು ಉದ್ಘಾಟಿಸಲಿದ್ದು, ’ಗದ್ದಿಗೆ’ ಸ್ಮರಣ ಸಂಚಿಕೆಯನ್ನು ಡಾ.ಎಂ.ಮೋಹನ್ ಆಳ್ವ ಬಿಡುಗಡೆ ಮಾಡಲಿದ್ದಾರೆ. ಶ್ರೇಷ್ಠ ಸಾಧನೆ ಮಾಡಿರುವ ಪದ್ಮಶ್ರೀ ಅಮೈ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಲಾಗುವುದು. ಮರಾಟಿಗರ ಅಹವಾಲುಗಳನ್ನು ಸಮಾವೇಶದ ಗೌರವಾಧ್ಯಕ್ಷ ಡಾ. ಕೆ. ಸುಂದರ್ ನಾಯ್ಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯನ್ನು ತಿಳಿಸಿದರು.

೯ರಂದು ಕರ್ನಾಟಕ ಮರಾಟಿ ಸಂಘ ಬೆಂಗಳೂರು ಇವರ ಸಹಕಾರದಿಂದ ಮರಾಟಿಗರಿಗಾಗಿಯೇ ಉದ್ಯೋಗ ಮೇಳ ಹಮ್ಮಿಕೊಂಡಿದ್ದು, ಈಗಾಗಲೇ ೧೫೦೦ಕ್ಕೂ ಹೆಚ್ಚು ಮರಾಟಿ ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಾಯಿಸಿದ್ದಾರೆ. ೩೦ಕ್ಕೂ ಅಽಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ ಎಂದರು.

ಪ್ರಮುಖರಾದ ಡಾ. ಕೆ. ಸುಂದರ್ ನಾಯ್ಕ, ಎನ್.ಎಸ್ ಮಂಜುನಾಥ್ ನಾಯ್ಕ, ಮಹಾಲಿಂಗ ನಾಯ್ಕ ನರಿಮೊಗರು, ಮೀನಾಕ್ಷಿ ಮಂಜುನಾಥ್ ಉಪಸ್ಥಿತರಿದ್ದರು.