ಜಿಲ್ಲೆ

ವಿಜ್ಞಾನ, ತಂತ್ರಜ್ಞಾನ ಮಾನವನಿಗೆ ಅವಶ್ಯ

ಮಡಿಕೇರಿ:

ವಿಜ್ಞಾನ ಮತ್ತು ತಂತ್ರಜ್ಞಾನ ಇಲ್ಲದ ಮಾನವನ ಬದುಕು ಊಹಿಸಿಕೊಳ್ಳುವುದು ಕಷ್ಟಸಾಧ್ಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಕೊಡಗು ವಿಶ್ವವಿದ್ಯಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮಹಾವಿದ್ಯಾಲಯದ ಅಮೃತ ಮಹೋತ್ಸವ ಪ್ರಯುಕ್ತ ಕನ್ನಡದಲ್ಲಿ 5ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದ ಮೂರು ದಿನದ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

ಸರ್ವರಿಗೂ ವಿಜ್ಞಾನ, ಸುಲಭ ವಿಜ್ಞಾನ, ಸುಸ್ಥಿರ ಅಭಿವೃದ್ಧ್ದಿಗಾಗಿ ವಿಜ್ಞಾನ ಎಂಬ ಆಶಯದೊಂದಿಗೆ ನಾಡಿನಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಜ್ಞಾನವನ್ನು ಜನಪ್ರಿಯಗೊಳಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಳೆ, ಬಿಸಿಲು, ಚಳಿ ಸೇರಿದಂತೆ ಭೂಮೇಲ್ಮೆöÊ ವಾತಾವರಣ ಪ್ರಾಕೃತಿಕವಾಗಿ ಪ್ರತೀ ನಿತ್ಯದ ಚಟುವಟಿಕೆಯನ್ನು ಮುಂಚಿತವಾಗಿಯೇ ತಿಳಿಯುವಂತಾಗಲು ವಿಜ್ಞಾನ ಮತ್ತು ತಂತ್ರಜ್ಞಾನ ಅತ್ಯವಶ್ಯಕವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ ಮತ್ತು ಕುತೂಹಲ ಇರಬೇಕು. ಇದರಿಂದ ವೈಜ್ಞಾನಿಕವಾಗಿ ಸಂಶೋಧನೆಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಕನ್ನಡದಲ್ಲಿಯೇ ಮಾಹಿತಿ ದೊರೆಯುತ್ತಿದ್ದು, ಇದನ್ನು ಹೆಚ್ಚು ಬಳಸಬೇಕು. ಇದರಿಂದ ಹಂತ ಹಂತವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದರು.

ಮುಖ್ಯಮAತ್ರಿ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ವಿಜ್ಞಾನ ಮತ್ತು ತಂತ್ರöಜ್ಞಾನ ಮಾನವನ ಬೆಳವಣಿಗೆಗೆ ಅತ್ಯವಶ್ಯಕ. ಆ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವದಲ್ಲಿ ಅಗಾಧವಾಗಿ ಬೆಳೆದಿದೆ. ಅಮೇರಿಕಾದ ಬಾಹ್ಯಾಕಾಶ ವಿಜ್ಞಾನಿಗಳು 9 ತಿಂಗಳ ಕಾಲ ಅಂತರರಾಷ್ಟಿçÃಯ ಬಾಹ್ಯಾಕಾಶ ಕೇಂದ್ರದಲ್ಲಿ ಇದ್ದು, ವಿಜ್ಞಾನಕ್ಕೆ ಸಂಬAಧಿಸಿದAತೆ ಹಲವು ಸಂಶೋಧನೆ ಕೈಗೊಂಡು ಭೂಮಿಗೆ ವಾಪಸ್ಸು ಬಂದಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಇದೊಂದು ಮೈಲಿಗಲ್ಲು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ಪ್ರಸ್ತುತ ಕೃತಕ ಬುದ್ದಿಮತ್ತೆ(ಎಐ) ವರೆಗೂ ಮುಂದುವರಿದಿದೆ. ಆ ನಿಟ್ಟಿನಲ್ಲಿ ಒಳ್ಳೆಯದನ್ನು ಸರಿಯಾಗಿ ಬಳಸಿಕೊಂಡು ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ ನಾಡಿನ ಭಾಷೆ ಹಾಗೂ ಮಾತೃ ಭಾಷೆ ಕನ್ನಡವಾಗಿದ್ದು, ಕನ್ನಡ ಭಾಷೆಯ ಬಗ್ಗೆ ಅಭಿಮಾನ ಇರಬೇಕು. ನಾಡಗೀತೆಯನ್ನು ವಿದ್ಯಾರ್ಥಿಗಳು ಹಾಡುವಂತಾಗಬೇಕು. ಅದನ್ನು ಬಿಟ್ಟು ಧ್ವನಿವರ್ಧಕ ಮೂಲಕ ನಾಡಗೀತೆ ಹಾಡಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮಕ್ಕಳಿಗೆ ಜೀವನದ ಮತ್ತು ಬದುಕಿನ ಶಿಕ್ಷಣ ಕಲಿಸಬೇಕು. ಬುದ್ಧ, ಬಸವ, ಅಂಬೇಡ್ಕರ್, ಮಹಾತ್ಮಗಾಂಧಿ, ಕುವೆಂಪು, ಪುರಂದರ ದಾಸರು, ಕನಕದಾಸರು, ನಾರಾಯಣಗುರು ಹೀಗೆ ಹಲವು ದಾರ್ಶನಿಕರ ಮಾತುಗಳು ಇಂದಿಗೂ ಪ್ರಸ್ತುತವಾಗಿವೆ. ಆ ನಿಟ್ಟಿನಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು. ನಾಡುನುಡಿಯ ಬಗ್ಗೆ ಶಿಕ್ಷಣ ತಜ್ಞರ ಮೂಲಕ ಪಠ್ಯಪುಸ್ತಕ ರಚಿಸಬೇಕು. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಎಂಪಿ. ಸುಜಾ ಕುಶಾಲಪ್ಪ ಮಾತನಾಡಿ ವಿಜ್ಞಾನ ಮತ್ತು ತಂತ್ರಜ್ಞಾನ ಮಾನವ ಜೀವನದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರ ಎಂದರು.

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ ಸಂಗಪ್ಪ ಆಲೂರ, ವಿಶ್ವ ವಿದ್ಯಾಲಯಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎ.ಎಂ. ರಮೇಶ್ ಮಾತನಾಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ.ಸುರೇಶ ಎಚ್.ಜಂಗಮಶೆಟ್ಟಿ, ಹಾಸನ ವಿಶ್ವವಿದ್ಯಾಲಯದ ಕುಲಪತಿ ಡಾ.ತರೀಕೆರೆ ಸಿ.ತಾರಾನಾಥ್, ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಡಾ.ಎಂ.ಆರ್.ಗAಗಾಧರ್, ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿ ಡಾ.ಆನಂದ ಎಸ್. ದೇಶಪಾಂಡೆ, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಬೀದರ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಎಸ್. ಬಿರಾದಾರ್, ಎಫ್‌ಎಂಕೆಎAಸಿ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಬಿ. ರಾಘವ, ಸಿಂಡಿಕೇಟ್ ಸದಸ್ಯರಾದ ಪುಟ್ಟರಾಜಪ್ಪ, ಡಾ. ಎಂ. ವಾಣಿ. ಕೆ.ಎನ್. ಜನಾರ್ಧನ್, ಡಾ. ಕೆ.ಸಿ. ದಯಾನಂದ ಡಾ.ಎಂ.ಜಿ. ಕಾವೇರಿಯಪ್ಪ, ಡಾ. ಡಿ.ಕೆ.ಸರಸ್ವತಿ, ಕುಲಸಚಿವ (ಮೌಲ್ಯಮಾಪನ) ಡಾ.ಎಂ. ಸುರೇಶ ಇತರರು ಇದ್ದರು.