ಶನಿವಾರಸಂತೆ: ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಗೆ ಸೇರಿದ ವಿವಿಧ ಗ್ರಾ.ಪಂ.ಗಳಿಗೆ ಸಂಬಂಧಿಸಿದ ಕುಂದು- ಕೊರತೆ ಮತ್ತು ಜಟಿಲ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರೊಂದಿಗೆ
ಸೆ. 1ರಂದು ಶನಿವಾರಸಂತೆ ಪ್ರೆಸ್ ಕ್ಲಬ್ ವತಿಯಿಂದ ಸಂವಾದ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಂವಾದದಲ್ಲಿ ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತಾ ಹರೀಶ್, ಉಪಾಧ್ಯಕ್ಷ ಸರ್ದಾರ್ ಆಹಮದ್, ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಭವಾನಿ, ಉಪಾಧ್ಯಕ್ಷೆ ಗೋಪಿಕಾ, ನಿಡ್ತ ಗ್ರಾ.ಪಂ.ಅಧ್ಯಕ್ಷ ಟಿ.ಕೆ.ಅಶೋಕ್, ಉಪಾಧ್ಯಕ್ಷೆ ಸುಮಿತ್ರಾ, ಗೌಡಳ್ಳಿ ಗ್ರಾ.ಪಂ.ಅಧ್ಯಕ್ಷ ಮಂಜುನಾಥ್, ಆಲೂರು ಸಿದ್ದಾಪುರ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.