ಭದ್ರಾವತಿ: ಇಲ್ಲಿನ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆ.26 ಹಾಗೂ 27ರಂದು ಏರ್ಪಡಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಹಳೇನಗರದ ಸಂಚಿಹೊನ್ನಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ಇವರ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.