ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಕೋಡಿ ಹೊಳೆಯಲ್ಲಿ ಡ್ರೆಜ್ಜಿಂಗ್ ಯಂತ್ರ ಬಳಸಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮರಳು ತೆಗೆಯುತ್ತಿದ್ದರೂ, ಸಾಲೆತ್ತೂರು ಗ್ರಾಮ ಪಂಚಾಯಿಗೆ ಮೌನ ವಹಿಸಿತ್ತು. ಈ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ವಿಟ್ಲ ಉಪನಿರೀಕ್ಷಕ ರತ್ನ ಕುಮಾರ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.