ಅರಕಲಗೂಡು ತಾಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿರುವುದು. 
ಜಿಲ್ಲೆ

ಶ್ರೀಗಂಧ ಮರದ ತುಂಡುಗಳು ವಶ

ಅರಕಲಗೂಡು:ತಾಲೂಕಿನ ಬೆಟ್ಟಸೋಗೆ ಗ್ರಾಮದಲ್ಲಿ ದಾಸ್ತಾನು ಮಾಡಿದ್ದ ಶ್ರೀಗಂಧ ಮರದ ತುಂಡುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಗ್ರಾಮದ ರಾಜಶೇಖರಯ್ಯ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಶ್ರೀಗಂಧದ ತುಂಡುಗಳು ಇರುವ ಕುರಿತು ಖಚಿತ ಮಾಹಿತಿ ಮೇರೆಗೆ ಇತ್ತೀಚೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, 37 ಕೆಜಿ ತೂಕದ 10 ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಅರಣ್ಯ ಕಾನೂನಿನ ಅನ್ವಯ ರಾಜಶೇಖರಯ್ಯ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ತಿಳಿಸಿದ್ದಾರೆ.
ಅರಣ್ಯ ಪಾಲಕರಾದ ರಾಘವೇಂದ್ರ ಕುಮಾರ್, ದೇವೇಂದ್ರ, ನಾಗೇಶ್ ದಾಳಿಯಲ್ಲಿ ಭಾಗವಹಿಸಿದ್ದರು.