ಜಿಲ್ಲೆ

ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು:  ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇರಿಸಲಾಗಿದೆ.

ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್, ವಿಷ್ಣುವರ್ಧನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರ ಜತೆ ತೆರೆ ಮೇಳೆ ಕಾಣಿಸಿಕೊಂಡಿದ್ದಾರೆ.