ಬೆಳ್ತಂಗಡಿ: ದಾಂಡೇಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಸಂದೇಶ್ ಎಸ್.ಜೈನ್ ಅವಿರೋಧ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ದಾಂಡೇಲಿ ಜೈನ ಸಮಾಜದ ಅಧ್ಯಕ್ಷರಾಗಿ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಕನ್ಯಾಡಿ 1 ಗ್ರಾಮದ ನಿವಾಸಿಯಾಗಿದ್ದು, ನಾಭಿರಾಜ್ ಜೈನ್ ಮತ್ತು ಶಶಿಕಲಾ ಜೈನ್ ದಂಪತಿ ಪುತ್ರ.