ಸಂಡೂರು: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಶನಿವಾರ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ನಡೆಯಿತು.
ಮುಖ್ಯಾಧಿಕಾರಿ ಕೆ.ಜಯಣ್ಣ ಮಾತನಾಡಿ, ಮಕ್ಕಳನ್ನು ಅಂಗಡಿ, ಹೋಟೆಲ್, ಗ್ಯಾರೇಜ್‌ಗಳಲ್ಲಿ ದುಡಿಸಿಕೊಳ್ಳುವುದು ಅಪರಾಧ. ಅಂತಹ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಪ್ಲಾಸ್ಟಿಕ್ ಚೀಲಗಳು ಹಾಗೂ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನವರಿಗೆ ಮಾರಾಟ ಮಾಡುವುದು ಕಾನೂನುಬಾಹಿರ ಎಂದರು. ಬಳಿಕ ವಿವಿಧ ಅಂಗಡಿ, ಹೋಟೆಲ್‌ಗಳ ಮೇಲೆ ದಾಳಿ ಮಾಡಿ, ಪ್ಲಾಸ್ಟಿಕ್ ಹಾಗೂ 5600 ರೂ. ದಂಡ ವಸೂಲಿ ಮಾಡಿದರು.