ಜಿಲ್ಲೆ

ನ.27ರಂದು ಸಂಗಮ ಕಾದಂಬರಿ ಬಿಡುಗಡೆ

Mangaluru - Hariprasad Rai



ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್, ದಕ್ಷಿಣ ಕನ್ನಡ ಇದರ ವತಿಯಿಂದ ಡಾ.ಎಚ್.ಆರ್.ವಿಶ್ವಾಸ ಅವರ ‘ಸಂಗಮ ‘ಕಾದಂಬರಿಯ ಬಿಡುಗಡೆ ಹಾಗೂ ಅಭಾಸಾಪ ಮಂಗಳೂರು ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಘೋಷಣೆ
ಕಾರ್ಯಕ್ರಮ ನ.27ರಂದು ಸಾಯಂಕಾಲ 5ಕ್ಕೆ ನಗರದ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಧ್ಯಾನ ಮಂದಿರ
ಸಭಾಂಗಣದಲ್ಲಿ ನಡೆಯಲಿದೆ. ಕರ್ಣಾಟಕ ಬ್ಯಾಂಕ್‌ನ ನಿಕಟಪೂರ್ವ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಇಒ ಎಂ.ಎಸ್.ಮಹಾಬಲೇಶ್ವರ ಕಾದಂಬರಿ ಬಿಡುಗಡೆಗೊಳಿಸಲಿದ್ದಾರೆ. ಅಭಾಸಾಪ ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಶಕ್ತಿನಗರದ ಸರ್ಕಾರಿ ಪ.ಪೂ.ಕಾಲೇಜಿನ ಕನ್ನಡ ಉಪನ್ಯಾಸಕಿ ಸುಮನಾ ನಂದೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅಭಾಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಿಮಳ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.