ಜಗಳೂರು: ಇಲ್ಲಿನ ನವಚೇತನ ಪ್ರೌಢಶಾಲೆ ವಿದ್ಯಾರ್ಥಿ ಡಿ. ಸಂಜಯ್ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪಟ್ಟಣದ ಬೇಡರಕಣ್ಣಪ್ಪ ವಸತಿಯುತ ಶಾಲೆಯಲ್ಲಿ ಬಿಇಒ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ನಡೆದ 2023-24ನೇ ಸಾಲಿನ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆಯಿಂದ ಪ್ರತಿನಿಧಿಸಿದ್ದ ವಿದ್ಯಾರ್ಥಿ ಡಿ. ಸಂಜಯ್ ತೀವ್ರ ಪೈಪೋಟಿಯ ನಡುವೆಯೂ ಗೆಲುವು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ ಎಂದು ಶಾಲಾ ಮುಖ್ಯಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.