ಕುಮಟಾ: ಪ್ರಾಥಮಿಕ ಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಮಣಕೋಣದ ಸರ್ಕಾರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಸಂಕೇತ ಹನುಮಂತ ಗೌಡ, ಬಾಲಕರ ವೈಯಕ್ತಿಕ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಗೀತಾ, ಶಿಕ್ಷಕಿ ಕಲ್ಪನಾ ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.