ಜಿಲ್ಲೆ

Bigg Boss ಜರ್ನಿ ಹೆಮ್ಮೆ ಪಡುವಂತದ್ದು, ಬೇರೆ ಯಾರು ನಿಮ್ಮ ರೀತಿ ಮಾಡಲು ಸಾಧ್ಯವಿಲ್ಲ: ಸಾನ್ವಿ ಸುದೀಪ್

ಬೆಂಗಳೂರು: ಕಿಚ್ಚ ಸುದೀಪ್ ( Sudeep​ )​​ ಸಾರಥ್ಯದಲ್ಲಿ ನಡೆಯುತ್ತಿರುವ ಬಿಗ್​ಬಾಸ್ ( Bigg Boss ) ಕನ್ನಡ​ ಸೀಸನ್​​ 11 ನಂತರ ಮುಂದಿನ ಸೀಸನ್​ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸುದೀಪ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಟ್ವೀಟ್​​ ಮಾಡುತ್ತಿದ್ದಂತೆ ಹತ್ತು ಹಲವು ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ. ಸುದೀಪ್​ ಮಗಳು ಸಾನ್ವಿ  (sanvi sudeep ) ಕೂಡಾ  ತಂದೆ ಕುರಿತಾಗಿ ಟ್ವೀಟ್​ ಮಾಡಿದ್ದಾರೆ. 

ಸುದೀಪ್​ ಅವರ ಟ್ವೀಟ್​​ನಲ್ಲಿ ಏನಿದೆ?: 

‘ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ. ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​. ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್​ ಅವರು ಶಾಕಿಂಗ್​ ವಿಷಯ ತಿಳಿಸಿದ್ದಾರೆ.

ಸಾನ್ವಿ ಸುದೀಪ್ ಹೇಳಿದ್ದೇನು?
ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂತದ್ದು. ಬೇರೆ ಯಾರು ನಿಮ್ಮ ರೀತಿ ಮಾಡಲು ಸಾಧ್ಯವಿಲ್ಲ. ಬಿಗ್ ಬಾಸ್ ವೇದಿಕೆ ಮೇಲೆ ನೀವು ಅಮೋಘವಾಗಿ ಕಾಣಿಸಿಕೊಳ್ಳುವುದನ್ನ ತಪ್ಪಿಸಿಕೊಳ್ಳುತ್ತೀರಿ. ಆದರೆ ಬಿಗ್ ಬಾಸ್ ಜರ್ನಿಯಲ್ಲಿ ನಿಮ್ಮನ್ನು ನೋಡಿದ್ದು ನನಗೆ ಅತ್ಯಂತ ಸಂತೋಷವನ್ನು ತಂದಿದೆ. ಬಿಗ್‌ ಬಾಸ್‌ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ. ಇಲ್ಲಿವರೆಗೂ ಬಿಗ್ ಬಾಸ್ ಶೋಗೆ ನೀವು ನೀಡಿರುವ ಕೊಡುಗೆಗೆ ನಾನು ಹೆಮ್ಮೆ ಪಡುತ್ತೇನೆಂದು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಿಗ್​ಬಾಸ್​​ ವೀಕ್ಷಕರು ಕಿಚ್ಚನ ಸಂಚಿಕೆ ನೋಡಲು ವೀಕೆಂಡ್​ನಲ್ಲಿ ಮಿಸ್​ ಮಾಡಿಕೊಳ್ಳುವುದು ಪಕ್ಕಾ ಹೌದು. ಸುದೀಪ್​ ಅವರು ಇಲ್ಲದೆ ಬಿಗ್​ಬಾಸ್​​ ಕಾರ್ಯಕ್ರಮವೇ ಇಲ್ಲ ಎಂದು ಸೋಶಿಯಲ್​​ ಮೀಡಿಯಾದಲ್ಲಿ ಕಾಮೆಂಟ್​​ ಮಾಡುತ್ತಿದ್ದಾರೆ.