ಮಡಿಕೇರಿ:
ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮೂರ್ನಾಡು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಮೂರ್ನಾಡು ಸಮುದಾಯ ಭವನದಲ್ಲಿ "ರಾಷ್ಟ್ರದ ಏಳಿಗೆಗೆ ಸಮಗ್ರತೆಯ ಸಂಸ್ಕೃತಿ "ಎಂಬ ಶೀರ್ಷಿಕೆ ಬುಧವಾರ ಅಡಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ, ಲೋಕಾಯುಕ್ತ ಉಪ ಅಧೀಕ್ಷಕ ಅಧಿಕಾರಿ ಕೆ.ಸಿ. ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಜಯಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು. ಶಾಸ್ತ್ರಿ ನಗರ ಮತ್ತು ಕಬಡಗಿರಿ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಮತ್ತು ಲೋಕಾಯುಕ್ತರು ಭೇಟಿ ನೀಡಿ ಪರಿಶೀಲಿಸಿದರು.