ಜಿಲ್ಲೆ

ಹಾಡು ಹಗಲೇ ಮಹಿಳೆ ಚಿನ್ನದ ಕಸಿದು ಪರಾರಿಯಾಗಿದ್ದ ಸರಗಳ್ಳಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ

ಮೈಸೂರು: ನಗರ ಬಸ್ ನಿಲ್ದಾಣದಲ್ಲಿ ಶನಿವಾರ ಹಾಡು ಹಗಲೇ ಮಹಿಳೆ ಚಿನ್ನದ ಕಸಿದು ಪರಾರಿಯಾಗಿದ್ದ ಸರಗಳ್ಳಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ತಮಿಳು ನಾಡು ಮೂಲದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ: ಮೈಸೂರು ತಾಲೂಕಿನ ಕಾಮನಕೆರೆಹುಂಡಿ ನಿವಾಸಿ ಸಾಕಮ್ಮ ಎಂಬವರು ವಾಪಸ್ ಊರಿಗೆ ತೆರಳುವ ಸಲುವಾಗಿ ನಗರ ಬಸ್ ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಮಹಿಳೆಯೊಬ್ಬರು ಆಕೆಯ ಕುತ್ತಿಗೆಗೆ ಕೈ ಹಾಕಿ ಸುಮಾರು 3.50 ಲಕ್ಷ ರೂ. ಮೌಲ್ಯದ 45 ಗ್ರಾಂ ಚಿನ್ನದ ಸರವನ್ನು ಕಸಿದು ಓಡಲಾರಂಬಿಸಿದ್ದಾಳೆ. ತಕ್ಷಣ ಸಾರ್ವಜನಿಕರು ಮಹಿಳೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಾಕಮ್ಮ ನೀಡಿದ ದೂರಿನ ಮೇರೆಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.