ಜಿಲ್ಲೆ

ಮದ್ಯ ಸೇವನೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ

Haveri - Kariyappa Aralikatti

ಸವಣೂರ: ಮದ್ಯದ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರಬಡಗಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ರುದ್ರಪ್ಪ ನಾಗಪ್ಪ ಬಸಾಪುರ (32) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಹೊರಬಾರಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.