ಮಡಿಕೇರಿ:
ಮಡಿಕೇರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ. ಕೋರನ ಸರಸ್ವತಿ ಅವರನ್ನು ಕೊಡಗು ವಿವಿಯ ಸಿಂಡಿಕೇಟ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಕುಲಪತಿ ಆದೇಶ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದ್ದು, 1 ವರ್ಷ, ನಿವೃತ್ತಿ ದಿನಾಂಕ ಅಥವಾ ಮುಂದಿನ ಆದೇಶ ಇವುಗಳಲ್ಲಿ ಯಾವುದು ಮೊದಲು ಬರುವುದೋ ಅಲ್ಲಿಯ ತನಕ ಸಿಂಡಿಕೇಟ್ ಸದಸ್ಯರಾಗಿ ಇರಲಿದ್ದಾರೆ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.