ಜಿಲ್ಲೆ

ಸರಸ್ವತಿ ಮಂದಿರ ಶಾಲಾ ಶತಮಾನೋತ್ಸವ ಸಂಭ್ರಮಾಚರಣೆ

ಇಂದಿರಾ ಎನ್ ಕೆ

ಪಡುಬಿದ್ರಿ: ಆಂಗ್ಲ ಮಾಧ್ಯಮದ ಭರಾಟೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿಕೊಳ್ಳುವುದು ಸವಾಲಿನ ಮಾತಾಗಿದೆ. ಇಂತಹ ಸಂಕೀರ್ಣ ಪರಿಸ್ಥಿತಿಯಲ್ಲಿ ಉಚ್ಚಿಲ ಸರಸ್ವತಿ ಮಂದಿರ ಶಾಲೆಯು ನೂರು ವರ್ಷ ಪೂರೈಸುತ್ತಿರುವುದು ಸಂಭ್ರಮ ತಂದಿದೆ ಮಾಡಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಉಚ್ಚಿಲ ಸರಸ್ವತಿ ಮಂದಿರ ಶಾಲಾ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.

ವಾಗ್ಮಿ ಪ್ರಕಾಶ್ ಮಲ್ಪೆ ದಿಕ್ಸೂಚಿ ಭಾಷಣ ಮಾಡಿದರು. ಶತಮಾನೋತ್ಸವ ಪ್ರಯುಕ್ತ ಹಳೇ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ನೂತನವಾಗಿ ಆರಂಭಿಸಲಾದ ವಿದ್ಯಾನಿಧಿ ಯೋಜನೆಗೆ ಚಾಲನೆ ನೀಡಲಾಯಿತು. ಉಭಯ ಶಾಲಾ ಸಂಚಾಲಕರು, ನಿವೃತ್ತ ಶಿಕ್ಷಕರು, ಸಾಧಕ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಸತೀಶ್ ಕುಲಾಲ್, ಕಾಂತಿ ಆಚಾರ್ಯ ಅವರನ್ನು ಗೌರವಿಸಲಾಯಿತು.

ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಮಾಜಿ ಸದಸ್ಯ ಯು.ಸಿ.ಶೇಖಬ್ಬ, ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಉಪಾಧ್ಯಾಯ, ಉದ್ಯಮಿ ಧೀರಜ್ ಹುಸೇನ್, ಶಾಲಾಡಳಿತ ಮಂಡಳಿ ಸದಸ್ಯ ಲಕ್ಷ್ಮೆಶ ಭಟ್, ಉಚ್ಚಿಲ ಸರಸ್ವತಿ ಮಂದಿರ ಪ್ರೌಢಶಾಲಾ ಮುಖ್ಯಶಿಕ್ಷಕ ಬಾಬುರಾಯ ಆಚಾರ್ಯ, ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಗೀತಾ ವೈ., ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷೆ ಲಕ್ಷ್ಮೀ ಟೀಚರ್, ಅಧ್ಯಕ್ಷ ದ್ಯುಮಣಿ ಆರ್.ಭಟ್, ಕಾರ್ಯದರ್ಶಿ ಸತೀಶ್ ಕುಲಾಲ್, ಕೋಶಾಧಿಕಾರಿ ಅನಿತ್ ಸಾಲ್ಯಾನ್, ವಿದ್ಯಾನಿಧಿ ಅಧ್ಯಕ್ಷ ಕರುಣಾಕರ ಕೋಟ್ಯಾನ್ ಉಪಸ್ಥಿತರಿದ್ದರು. ವಿದ್ಯಾನಿಧಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಶ್ರೀಪತಿ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಕೇಶ್ ಕುಂಜೂರು ವಂದಿಸಿದರು. ಸತೀಶ್ ಗುಡ್ಡೆಚ್ಚಿ ನಿರೂಪಿಸಿದರು.