ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರ ಉದ್ಘಾಟನೆಗೊಂಡಿತು.  
ಜಿಲ್ಲೆ

ಸರಸ್ವತಿ ವಿದ್ಯಾಲಯದಲ್ಲಿ ಬೇಸಿಗೆ ಶಿಬಿರ ಆರಂಭ

ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಸ್ಟೆಮ್ರೋಬೋ ಟೆಕ್ನಾಲಜೀಸ್ ಸಹಕಾರದೊಂದಿಗೆ ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ಐದು ದಿನಗಳ ಎಟಿಎಲ್ ಬೇಸಿಗೆ ಶಿಬಿರ ಸೋಮವಾರ ಉದ್ಘಾಟನೆಗೊಂಡಿತು.

ಗಂಗೊಳ್ಳಿ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆ ಆಡಳಿತ ಮಂಡಳಿ ಸದಸ್ಯರಾದ ಕೆ.ರಾಮನಾಥ ನಾಯಕ್, ಎನ್.ಅಶ್ವಿನ್ ನಾಯಕ್, ಸ್ಟೆಮ್ರೋಬೋ ಟೆಕ್ನಾಲಜೀಸ್‌ನ ಸರ್ವೇಶ್ ನಾಯ್ಕ, ಶಿಕ್ಷಕಿಯರಾದ ಜಯಶ್ರೀ ವಿ.ನಾಯಕ್, ಸವಿತಾ ಆಚಾರ್ಯ, ಮಾಲತಿ ಹಾಗೂ ದೈಹಿಕ ಶಿಕ್ಷಕಿ ಲಾವಣ್ಯ ಉಪಸ್ಥಿತರಿದ್ದರು.

ಶಿಬಿರದಲ್ಲಿ ತಾಂತ್ರಿಕ ಚಟುವಟಿಕೆಗಳು, ಚಿತ್ರಕಲೆ, ಪೇಪರ್ ಕ್ರಾಫ್ಟ್, ಆಟಗಳು, ಕ್ಲೇ ಮಾಡ್ಲಿಂಗ್ ಹಾಗೂ ವಿವಿಧ ಸ್ಪರ್ಧೆ ನಡೆಯಲಿದೆ.