ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮತ್ತು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಗಂಗೊಳ್ಳಿಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಟೆನ್ನಿಕಾಯ್ಟಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿದೆ.
ತಂಡದಲ್ಲಿ ವೈಭವ್, ವಿಶ್ವಾಸ್,ಸಂಕೇತ್, ಅಕ್ಷಯ್ ಬಿಲ್ಲವ ಮತ್ತು ಪ್ರಜ್ವಲ್ ಪೈ ಇದ್ದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.