ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಟೆನ್ನಿಕ್ವಾಯ್ಟಾ ಟೂರ್ನಿಯಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ಸಹನಾ ಖಾರ್ವಿ, ಮಾನ್ಯ ಖಾರ್ವಿ, ಭೂಮಿಕಾ ಖಾರ್ವಿ ಮತ್ತು ಅಮೂಲ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನಾ ಖಾರ್ವಿ ಬೆಸ್ಟ್ ಆಲ್‌ರೌಂಡರ್ ಪ್ರಶಸ್ತಿ ಪಡೆದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.