ಸಿರಗುಪ್ಪದ ತಹಸಿಲ್ ಕಚೇರಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಬಿಂಬ ಪುಸ್ತಕ ವಿತರಿಸಲಾಯಿತು. ತಹಸೀಲ್ದಾರ್ ಎಚ್.ವಿಶ್ವನಾಥ, ತಾಪಂ ಇಒ ಪ್ರದೀಪಕುಮಾರ್, ಪ್ರಭಾರ ಡಿವೈಎಸ್ಪಿ ಒಡೆಯರ್ ಇದ್ದರು. 
ಜಿಲ್ಲೆ

ನಿಜಾಮರಿಂದ ಮುಕ್ತರಾದ ಸುದಿನ

ಸಿರಗುಪ್ಪ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂತಹ ಮಹನೀಯರು ಹೋರಾಡಿದ ಪ್ರತಿಫಲದಿಂದ ಕಲ್ಯಾಣ ಕರ್ನಾಟಕಕ್ಕೆ ಸ್ವಾತಂತ್ರ್ಯ ದೊರಕಿದೆ ಎಂದು ತಹಸೀಲ್ದಾರ್ ಎಚ್.ವಿಶ್ವನಾಥ ಹೇಳಿದರು.

ಮಹನೀಯರು ಹೋರಾಡಿದ ಪ್ರತಿಫಲ

ನಗರದ ತಹಸಿಲ್ ಕಚೇರಿ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ನಿಜಾಮರ ಆಳ್ವಿಕೆಯಲ್ಲಿದ್ದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಭಾಗದ ಜನರು ಬಹಳ ಕಷ್ಟ ಅನುಭವಿಸುತ್ತಿದ್ದರು. ಅಂದಿನ ಪ್ರಧಾನಿ ಜವಾಹರಲಾಲ್ ನೆಹರು, ಸರ್ದಾರ ವಲ್ಲಭಭಾಯಿ ಪಟೇಲ್, ಡಾ.ಬಿ.ಆರ್.ಅಂಬೇಡ್ಕರ್ ದಿಟ್ಟಕ್ರಮದಿಂದ ಕಲ್ಯಾಣ ಕರ್ನಾಟಕ ಭಾಗದ ಜನರನ್ನು ನಿಜಾಮರಿಂದ ಮುಕ್ತಗೊಳಿಸಲಾಯಿತು ಎಂದರು.

ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಬಿಂಬ ಪುಸ್ತಕ ವಿತರಿಸಿಲಾಯಿತು. ತಾಪಂ ಇಒ ಪ್ರದೀಪಕುಮಾರ್, ಪ್ರಭಾರ ಡಿವೈಎಸ್ಪಿ ಒಡೆಯರ್, ಬಿಸಿಎಂ ತಾಲೂಕು ಅಧಿಕಾರಿ ಎ.ಗಾದಿಲಿಂಗಪ್ಪ, ಪರಮೇಶ್ವರ, ಬಿಆರ್‌ಸಿ ತಮ್ಮನಗೌಡ ಪಾಟೀಲ್, ದೈಹಿಕ ಶಿಕ್ಷಣ ಶಿಕ್ಷಕ ಈರಣ್ಣ, ಕಂದಾಯ ಅಧಿಕಾರಿಗಳಾದ ಮಂಜುನಾಥ, ಬಾಬುರಾವ್, ಸಿಬ್ಬಂದಿ ಅನಿತಾ, ಮಂಜುಳಾ ಇದ್ದರು.