ಜಿಲ್ಲೆ

ಸರ್ವೋತ್ತಮ ಪ್ರಶಸ್ತಿ ಪಡೆದ ಮಜ್ಜಗಿಗೆ ಸನ್ಮಾನ

ಹುಬ್ಬಳ್ಳಿ: ಸೇವಾ ಸರ್ವೋತ್ತಮ ಪ್ರಶಸ್ತಿ ಸ್ವೀಕರಿಸಿದ ಗ್ರಾಮೀಣ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘದ ಸಹಯೋಗದಲ್ಲಿ ಶುಕ್ರವಾರ ನಗರದಲ್ಲಿ ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಧಾರವಾಡ ಜಿಲ್ಲೆಯ ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಮಜ್ಜಗಿ ಅವರ ಸೇವೆ ಹಾಗೂ ತ್ವರಿತ ಕೆಲಸಗಳನ್ನು ಸ್ಮರಿಸಿದರು.

ಸಂಘದ ಅಧ್ಯಕ್ಷ ವಿ.ಎಫ್. ಚುಳುಕಿ ಮಾತನಾಡಿ, ಸವೋರ್ತ್ತಮ ಪ್ರಶಸ್ತಿ ಪಡೆದ ಮಜ್ಜಗಿ ಅವರ ಕಾರ್ಯಗಳನ್ನು ಕೊಂಡಾಡಿದರು.

ಡಿಡಿಪಿಐ ಎಸ್.ಎಸ್. ಕೆಳದಿಮಠ, ಡಿಡಿಎಲ್ ಆರ್ ಮೋಹನ್ ಶಿವಣ್ಣವರ, ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮಕ್ಕ ನವರ, ಮಂಜುನಾಥ ದಾಸಪ್ಪನವರ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ರಾಜ್ಯ ಪರಿಷತ್ ಸದಸ್ಯ ಪರಮಾನಂದ ಶಿವಳ್ಳಿಮಠ ಸ್ವಾಗತಿಸಿದರು. ಎಂ.ಎಚ್. ಜಂಗ್ಲಿ ವಂದಿಸಿದರು. ಖಜಾಂಚಿ ಬನವಿ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಕಂದಾಯ ಇಲಾಖೆ ನೌಕರರು ಪಾಲ್ಗೊಂಡಿದ್ದರು.