ಜಿಲ್ಲೆ

ಸಾಸ್ವೆಹಳ್ಳಿ ಆರೋಗ್ಯ ಕೇಂದ್ರಕ್ಕೆ ಗ್ರಾಪಂ ಅಧ್ಯಕ್ಷರ ಭೇಟಿ

ಸಾಸ್ವೆಹಳ್ಳಿ: ಆಸ್ಪತ್ರೆಯಲ್ಲಿ ಮೂಲಸೌಲಭ್ಯಗಳಿಲ್ಲವೆಂಬ ಸಾರ್ವಜನಿಕರ ದೂರಿನ ಮೇರೆಗೆ ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳೀಯ ಗ್ರಾಪಂ ಅಧ್ಯಕ್ಷ ಜಬ್ಬಾರ್ ಅಲಿ ಖಾನ್ ಮಂಗಳವಾರ ಭೇಟಿ ರೋಗಿಗಳ ಸಮಸ್ಯೆ ಆಲಿಸಿದರು.

ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ದೊರೆಯುತ್ತಿಲ್ಲ. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷೃ ವಹಿಸುತ್ತಾರೆ, ಮೂಲಸೌಲಭ್ಯಗಳಿಲ್ಲ ಎಂಬುದನ್ನು ಗಮನಿಸಿದ ಅಧ್ಯಕ್ಷರು, ಅಲ್ಲಿನ ವೈದ್ಯಾಧಿಕಾರಿಗಳ ಜತೆ ಚರ್ಚೆ ನಡೆಸಿದರು.

ನಂತರ ತಾಲೂಕು ಆರೋಗ್ಯಾಧಿಕಾರಿ ಡಾ.ಕೆಂಚಪ್ಪ ಅವರಿಗೆ ದೂರವಾಣಿ ಕರೆ ಮಾಡಿ, ಸ್ಥಳೀಯ ಆಸ್ಪತ್ರೆಗಳ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಬೇಡಿಕೆ ಈಡೇರಿಸುವುದಾಗಿ ತಾಲೂಕು ಆರೋಗ್ಯಾಧಿಕಾರಿ ಭರವಸೆ ನೀಡಿದರು.