ಜಿಲ್ಲೆ

ಬಿಜೆಪಿಗೆ ಜನತೆಯ ಮನ್ನಣೆ -ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Mangaluru - Hariprasad Rai


ಮಂಗಳೂರು : ಹರಿಯಾಣದಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಜಮ್ಮು ಕಾಶ್ಮೀರದಲ್ಲೂ ಪಕ್ಷದ ಸಾಧನೆ ಉತ್ತಮವಾಗಿದೆ. ಬಿಜೆಪಿ ಸರ್ಕಾರದ ಜನ ಪರ ಕಾರ್ಯಗಳಿಗೆ ಜನತೆ ಮನ್ನಣೆ ನೀಡಿದ್ದಾರೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಚುನಾವಣಾ ಫಲಿತಾಂಶಕ್ಕೆ ಪ್ರತಿಕ್ರಿಯಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ ಎಂದು ಬಿಂಬಿತವಾಗಿದ್ದರೂ. ಫಲಿತಾಂಶ ಪ್ರಕಟವಾದಾಗ ಬಿಜೆಪಿಗೆ ಜನತೆಯ ಸಂಪೂರ್ಣ ಬೆಂಬಲ ದೊರೆತಿರುವುದು ಪಕ್ಷದ ಕಾರ್ಯಕರ್ತರಿಗೆ ಸಂತಸ ’ತಂದಿದೆ. ಕಾಂಗ್ರೆಸ್ ಅಬ್ಬರದ ಗ್ಯಾರಂಟಿಗಳನ್ನು ಹರಿಯಾಣ ಚುನಾವಣಾ ಪ್ರನಾಳಿಕೆಯಲ್ಲಿ ಘೋಷಿಸಿದ್ದರೂ ದೇಶಾದ್ಯಂತ ಜನರ ವಿಶ್ವಾಸ ಕಳೆದುಕೊಂಡಿದ್ದರ ಪರಿಣಾಮವು ಈ ಫಲಿತಾಂಶದಲ್ಲಿ ಮೂಡಿಬಂದಿದೆ ಎಂದು ಅವರು ತಿಳಿಸಿದ್ದಾರೆ.