ಜಿಲ್ಲೆ

ಕಾಂಗ್ರೆಸ್ ಆಡಳಿತದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ- ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Mangaluru - Hariprasad Rai



ಮಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಮಾಜ ಘಾತುಕರಿಗೆ ಪೊಲೀಸ್ ಇಲಾಖೆಯ ಮೇಲೆ ಭಯವೇ ಇಲ್ಲದಂತಾಗಿದೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಬೀದರ್, ವಿಜಯಪುರದಲ್ಲಿ ದರೋಡೆಕೋರರು ಅಟ್ಟಹಾಸ ಮೆರೆದು ಜನಸಾಮಾನ್ಯರು ಆತಂಕದಿಂದ ಬದುಕುವಂತಾಗಿದೆ . ರಾಜ್ಯದ ಸ್ಪೀಕರ್ ಕ್ಷೇತ್ರ ಉಳ್ಳಾಲದಲ್ಲಿ ಬ್ಯಾಂಕ್ ದರೋಡೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ದರೋಡೆ ಘಟನೆ ನಡೆದಿರುವುದು ಪೋಲಿಸ್ ಇಲಾಖೆಯ ಸಂಪೂರ್ಣ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯ ಸಮಾಜ ಘಾತುಕರಿಗೆ ಸ್ವರ್ಗವಾಗಿದೆ ಎಂದು ಅವರು ಟೀಕಿಸಿದ್ದಾರೆ.