ಬೆಳಗಾವಿ: ಕಾಂಗ್ರೆಸ್ ಸರ್ಕಾರ ಮಹತ್ವದ 5 ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ನಾಳೆ ಬೆಳಗ್ಗೆ 12 ಗಂಟೆಗೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಗಮಿಸಲಿದ್ದಾರೆ. ಉತ್ತರ ಶಾಸಕ ಆಸೀಫ್ (ರಾಜು) ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ, ಚಿಕ್ಕೊಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ರಾಜ್ಯಸಭೆ ಸಂಸದ ಈರಣ್ಣಾ ಕಡಾಡಿ, ಬೆಳಗಾವಿ ಸಂಸದೆ ಮಂಗಲ ಸುರೇಶ ಅಂಗಡಿ ಆಗಮಿಸಲಿದ್ದಾರೆ.
ನಾಳೆಯಿಂದ ಮಹಿಳೆಯರು ರಾಜ್ಯದ ಒಳಗೆ ಎಲ್ಲಿಂದ ಎಲ್ಲಿಗೆ ಬೇಕಾದರೂ, ಎಷ್ಟು ಬಾರಿ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆದರೆ ರಾಜ್ಯದ ಒಳಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಬೇಕು. ನಾಲ್ಕು ನಿಗಮದ ಎಸಿ ಬಸ್ ಹೊರತುಪಡಿಸಿ ಎಲ್ಲಾ ವೇಗದೂತ ಸೇರಿದಂತೆ ನಾರ್ಮಲ್ ಬಸ್ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ.