ಜಿಲ್ಲೆ

ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಸತ್ಯನಾರಾಯಣ ಪೂಜೆ

Avinash R

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಶಾರದಾ ಪೂಜೆ ಮತ್ತು ಸತ್ಯನಾರಾಯಣ ಪೂಜೆ ನಡೆಯಿತು.

ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಅರ್ಚಕ ಗಣೇಶ್ ದೀಕ್ಷಿತ್ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಈ ಪ್ರಯುಕ್ತ ಭಜನಾ ಕಾರ್ಯಕ್ರಮ ನೆರವೇರಿತು. ಭಜನಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆ ನೆರವೇರಿತು.

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ಕಾಲೇಜು ಕಾರ್ಯದರ್ಶಿ ಅರವಿಂದ ಅಯ್ಯಪ್ಪ ಸುತಗುಂಡಿ, ಪ್ರಾಂಶುಪಾಲ ಸೋಮಶೇಖರ ನಾಯಕ್, ಹಿರಿಯ ಉಪನ್ಯಾಸಕಿ ರೇಖಾರಾಣಿ ಸೋಮಶೇಖರ್, ಮುಖ್ಯಗುರು ನಂದಾ, ಕುಕ್ಕೆ ದೇವಳದ ಅಭಿಯಂತರ ಉದಯ ಕುಮಾರ್, ಶ್ರೀ ದೇವಳದ ಶಿವಸುಬ್ರಹ್ಮಣ್ಯ ಭಟ್, ಸುಬ್ಬಪ್ಪ ಎನ್.ಸಿ., ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ರಾಜೇಶ್ ಎನ್.ಎಸ್., ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷ ವೆಂಕಟೇಶ್ ಎಚ್.ಎಲ್., ಪ್ರೌಢಶಾಲಾ ವಿಭಾಗ ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್, ರಘು ಬಿಜೂರ್, ಪ್ರೌಢಶಾಲಾ ವಿಭಾಗ ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷ ದಿನೇಶ್ ಶಿರಾಡಿ, ಕಲಾವಿದ ಗಣೇಶ್ ಪರ್ವತಮುಖಿ ಸೇರಿದಂತೆ ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.