ಜಿಲ್ಲೆ

ಸೆ.3ಕ್ಕೆ ಬೆಳ್ತಂಗಡಿ ಚಲೋ: ಮಹೇಶ್​ ಶೆಟ್ಟಿ ತಿಮರೋಡಿ

ಗೋಪಾಲಕೃಷ್ಣ ಪಾದೂರ್

ಉಡುಪಿ: ಸೌಜನ್ಯ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೆ ನಿರಂತರ ಹೋರಾಟ ಜಾರಿಯಲ್ಲಿಡಲಾಗುವುದು. ಈ ನಿಟ್ಟಿನಲ್ಲಿ ಸೆ.3ಕ್ಕೆ ಬೆಳ್ತಂಗಡಿ ಚಲೋ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮುಂದಿನ 3 ತಿಂಗಳಲ್ಲಿ ಸರ್ಕಾರ ಸೂಕ್ತಕ್ರಮಕೈಗೊಳ್ಳದಿದ್ದರೆ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಮಹೇಶ್​ ಶೆಟ್ಟಿ ತಿಮರೋಡಿ ಘೋಷಿಸಿದರು.

ಆಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಸೌಜನ್ಯ ಹೋರಾಟ ಸಮಿತಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಸೌಜನ್ಯ ಅತ್ಮಕ್ಕೆ ಶಾಂತಿ ಸಿಗಬೇಕಾದರೆ ಅರೋಪಿಗಳಿಗೆ, ಮರಣೋತ್ತರ ಪರೀೆ ನಡೆಸಿದ ವೈದ್ಯರು, ತನಿಖಾಧಿಕಾರಿ, ಅಂದಿನ ದ.ಕ. ಪೊಲೀಸ್​ ವರಿಷ್ಠಾಧಿಕಾರಿ ಎಲ್ಲರಿಗೂ ಶಿೆಯಾಗಬೇಕು. 11 ವರ್ಷದ ತನಿಖೆಯಲ್ಲಿ ಈ ಪ್ರಕರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ 80 ಕೋಟಿ ರೂ. ಖರ್ಚು ಮಾಡಿದೆ. ಅದರೂ ಅಕೆಯ ಕುಟುಂಬಕ್ಕೆ ನ್ಯಾಯ ದೊರಕಿಸಲು ಸಾಧ್ಯವಾಗಿಲ್ಲ. 2 ತಿಂಗಳಿನಿಂದ ಶಾಂತಾ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಹೋರಾಟಕ್ಕೆ ಕಿಚ್ಚು ಹಚ್ಚುವ ಪ್ರಯತ್ನ ಮಾಡಿದರೆ ಧರ್ಮಸ್ಥಳದಲ್ಲೆ ಲಾಂತರ ಮಂದಿ ಬಂದು ನಿಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರಶ್ನಿಸುವ ಹಕ್ಕು ಇದೆ ಎಂದು ಹೇಳಿದರು. ಸಾಮಾಜಿಕ ಕಾರ್ಯಕರ್ತ ತಮ್ಮಣ್ಣ ಶೆಟ್ಟಿ, ಸೌಜನ್ಯಾ ತಾಯಿ ಕುಸುಮಾವತಿ ಉಪಸ್ಥಿತರಿದ್ದರು.

ಬೃಹತ್​ ಪ್ರತಿಭಟನೆ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಆಗ್ರಹಿಸಿ ಮಹೇಶ್​ ಶೆಟ್ಟಿ ನೇತೃತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಬೃಹತ್​ ಪ್ರತಿಭಟನಾ ಸಭೆ ನಡೆಯಿತು. ಮಂಗಳವಾರ ಮಧ್ಯಾಹ್ನ, ಮಹೇಶ್​ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಪ್ರರ್ಥಿಸಿದರು. ನಂತರ ಅನಂತೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕಾಲ್ನಡಿಗೆ ಜಾಥದಲ್ಲಿ ರಥಬೀದಿಯ ಮೂಲಕ, ಸಂಸ್ಕತ ಕಾಲೇಜ್​, ತ್ರಿವೇಣಿ ಸರ್ಕಲ್​, ಕೋರ್ಟ್​ ರಸ್ತೆ, ಜೋಡುರಸ್ತೆಯ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕಕ್ಕೆ ಆಗಮಿಸಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು.

ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮ
ಮಹೇಶ್​ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯನ್ನು ವಿರೋಧಿಸಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೆಲವು ಮಹಿಳೆಯರು ಮತ್ತು ಧರ್ಮಸ್ಥಳದ ಅಭಿಮಾನಿಗಳು ಸ್ಥಳದಲ್ಲಿ ಜಮೆಯಾಗಿದ್ದು, ಧರ್ಮಸ್ಥಳ ಹಾಗು ಖಾವಂದರ ಪರ ಘೋಷಣೆ ಕೂಗಿದರು. ಈ ವೇಳೆ ಎರಡು ಗುಂಪಿನವರನ್ನು ಪ್ರತಿಭಟನಾ ಸ್ಥಳದಿಂದ ಕಳುಹಿಸಲು ಪೋಲಿಸರು ಹರಸಾಹಸ ಪಡಬೇಕಾಯಿತು. ರೋಪ್​ ಅಳವಡಿಸಿ ಬ್ಯಾರಿಕೇಡ್​ ಮೂಲಕ ಇವರನ್ನು ತಡೆಯಲು ಸಲರಾದರು. ಆದರೂ 100ಕ್ಕೂ ಅಧಿಕ ಮಹಿಳೆಯರು ಪ್ರತಿಭಟನೆ ಮುಗಿಯುವವರೆಗೂ ಪುರಭವನ ಮುಂಭಾಗ ನಿಂತು ಘೋಷಣೆ ಕೂಗುತ್ತಿದ್ದರು.