ಜಿಲ್ಲೆ

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Haveri - Kariyappa Aralikatti

ಸವಣೂರ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ಶಿವಲಿಂಗಪ್ಪ ಬಸವಣ್ಣೆಪ್ಪ ಸಾತಣ್ಣನವರ (45) ಮೃತ ರೈತ.
ಇವರು ಜಮೀನಿನಲ್ಲಿ ಬೆಳೆದ ಬೆಳೆ ಸರಿಯಾಗಿ ಬಾರದೆ ಇರುವುದರಿಂದ ಸಾಲ ತೀರಿಸುವುದು ಹೇಗೆ ಎಂದುಕೊಂಡು ಮನೆಯ ಹಿತ್ತಲಿನಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.