ಮಡಿಕೇರಿ:
ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡ ಮಾಡುವ ಸುವರ್ಣ ಕರ್ನಾಟಕ ವೀರ ವನಿತೆ ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಬೆಂಗಳೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು.
ಇವರು ಮಹಿಳೆಯರು ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಸ್ವಾರ್ಥದಿಂದ ಸೇವೆ ಸಲ್ಲಿಸಿದ್ದು, ಇವರ ಅನುಪಮ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆದ ರಾಷ್ಟ್ರೀಯ ಮಹಿಳಾ ಪ್ರತಿಭಾ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.