ಯಾದಗಿರಿಯಲ್ಲಿ ಬುಧವಾರ ನಡೆದ ಜಿ¯್ಲÁ ಮಕ್ಕಳ ರP್ಷÀಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಮಾತನಾಡಿದರು. ವಿವಿಧ ಇಲಾಖೆ ಅಧಿಕಾರಿಗಳಾದ ವೀರಣ್ಣಗೌಡ ಪಾಟೀಲ್, ಪ್ರೇಮಮೂರ್ತಿ, ಅರುಣಕುಮಾರ ಇತರರಿದ್ದರು. ---- 
ಜಿಲ್ಲೆ

ದೌರ್ಜನ್ಯಕ್ಕೆ ನೊಂದ ಸಂತ್ರಸ್ತರಿಗೆ ಆದ್ಯತೆ ಮೇಲೆ ಪರಿಹಾರ ವಿತರಿಸಿ : ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಸೂಚನೆ

ಬಾಬುರಾವ ಯಡ್ರಾಮಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಕಾಯ್ದೆ ಜಾಗೃತಿ ಸಮಿತಿ ಸಭೆ ನಡೆಸಿದ ಡಿಸಿ

ಯಾದಗಿರಿ : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ಅತಿ ಹೆಚ್ಚು ದೌರ್ಜನ್ಯ ನಡೆಯುವಂತಹ ಗ್ರಾಮಗಳ ಪಟ್ಟಿಯನ್ನು ಇಟ್ಟುಕೊಂಡು ತಕ್ಷಣ ಕಾಲ ಕಾಲಕ್ಕೆ ಭೇಟಿ ನೀಡಿ ಅಲ್ಲಿ ಸೂಕ್ತ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ  ಸೂಚನೆ ನೀಡಿದರು. ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಕಾಯ್ದೆ 1995ರ ನಿಯಮ 17ರ ರೀತ್ಯ ಜಿಲ್ಲಾ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

    1. ವಸತಿ ನಿಲಯಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೌರ್ಜನ್ಯ ನೊಂದ ಸಂತ್ರಸ್ತರಿಗೆ ಸೌಲಭ್ಯ ತಕ್ಷಣ ಪರಿಹಾರ ಮಾಡಬೇಕು, ಹತ್ತಿಗೂಡುರ ಗ್ರಾಮದಲ್ಲಿ ಸರ್ಕಾರಿ ಸರ್ವೇ ನಂಬರ್ ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೌರ್ಜನ್ಯಕೆ ನೊಂದ ಸಂತ್ರಸ್ತರಿಗೆ ಶಹಾಪೂರ ನಗರದಲ್ಲಿ 3 ಜನರಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು. ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ಪರಿಹಾರ ನೀಡಲು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿ ಕಾರ್ಯಗಳನ್ನು ನಿರ್ವಹಿಸಲು ಸೂಚಿಸಿದರು. ದೌರ್ಜನ್ಯ ಪ್ರಕರಣಗಳಗೆ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಚಿಸಿದರು.

ವಸತಿ ನಿಲಯ ಸುರಕ್ಷತಾ ಸಮಿತಿ ಸದಸ್ಯರಿಗೆ ಕಾಲಕಾಲಕ್ಕೆ ವಸತಿ ನಿಲಯ ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಸಲಹೆ ಸೂಚನೆ ನೀಡುವಂತೆ ಸೂಚಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಪಟ್ಟ 2024ರ ಜುಲೈ 14ರ ರಿಂದ 2025ರ ಜನವರಿ 9ರ ವರೆಗಿನ ಅವಧಿಯಲ್ಲಿ ನೊಂದ ಸಂತ್ರಸ್ತರಿಗೆ ಒಟ್ಟು 46 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ಜಿಲ್ಲಾಡಳಿತದಿಂದ ವಿತರಿಸಲಾಗಿದೆ.

ಜಿಲ್ಲಾ ಜಾಗೃತಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರು ವಿವಿಧ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು ಮಾನ್ಯ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಸಾರ್ವಜನಿಕ ಸಮಸ್ಯೆಗಳನ್ನು ಬಗ್ಗೆ ಹರಿಸಲು ಸೂಚಿಸಿದರು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳಿಗೆ ಸಂಬAಧಿಸಿದAತೆ ಈ ಅವಧಿಯಲ್ಲಿ ಪರಿಹಾರ ವಿತರಿಸಲು ಒಟ್ಟು 1.20 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆಯಾಗಿದೆ. ಉಳಿದ ಅನುದಾನ ಬಾಕಿ ಪ್ರಕರಣಗಳಿಗೆ ವೆಚ್ಚ ಭರಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರು ಪ್ರಶ್ನೆಗೆ ಜಿಲ್ಲಾಡಳಿತ ಕಛೇರಿ ಲೀಫ್ಟ್ ಸರಿ ಪಡಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

ಸುರಪುರ ನಗರಸಭೆ ಪೌರಾಯುಕ್ತ ಜೀವನಕುಮಾರ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಎಚ್ಚರಿಸಿದರು.

ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಭೂ ಒಡೆತನ ಯೋಜನೆ, ಈ ಜನಾಂಗಕ್ಕಾಗಿ ಸಾರ್ವಜನಿಕ ಸ್ಮಶಾನಭೂಮಿ ಸೌಲಭ್ಯ ಗುರುತಿಸುವ ಜೊತೆಗೆ ಪ್ರಸ್ತಾವನೆ ಸಲ್ಲಿಸಲು, ವಿವಿಧ ನಿಗಮಗಳ ವ್ಯಾಪ್ತಿಯಲ್ಲಿ ಈ ಜನಾಂಗಕ್ಕಾಗಿ ನೀಡಲಾಗುವ ಸಾಲಕ್ಕಾಗಿ ಅನಗತ್ಯ ದಾಖಲಾತಿ ಕೇಳದಂತೆ ಹಾಗೂ ಸ್ಮಶಾನ ಭೂಮಿ ಒತ್ತುವರಿಯಾಗಿರುವ ಬಗ್ಗೆ ಪರಿಶೀಲಿಸಿ ತಕ್ಷಣ ತೆರವು ಗೊಳಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸುರಪುರ ನಗರಸಭೆ ವ್ಯಾಪ್ತಿಯಲ್ಲಿ ನಗರದ ವಾರ್ಡ್ 29 ರಲ್ಲಿ ಸ್ಮಶನ ಭೂಮಿ ಪರಿಶೀಲಿಸಿ ಮಂಜೂರು ಮಾಡಲು ಸುರಪುರ ನಗರಸಭೆ ಪೌರಾಯುಕ್ತರು ಜೀವನಕುಮಾರಗೆ ಸೂಚಿಸಿದರು.

ದೌರ್ಜನ್ಯ ಪ್ರಕರಣಗಳ ಕುರಿತು ಸೂಕ್ತ ತನಿಖೆ ನಡೆಸಲು ದಸ್ತಗಿರಿ ಮಾಡುವುದರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರ ಗಮನಕ್ಕೆ ತಂದರು.

ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಮಾತನಾಡಿದರು, ದೌರ್ಜನ್ಯ ಪ್ರಕರಣಗಳಲ್ಲಿ ನಿಯಮನುಸಾರ ತನಿಖೆ ನಡೆಸಿ ತಪ್ಪಿಸ್ಥರನ್ನು ಬಂಧಿಸಲಾಗಿದೆ ಎಂದು ವಿವರಿಸಿದರು. ಸುರಪುರ ತಾಲೂಕಿನಲ್ಲಿ ದೌರ್ಜನ್ಯ ಪ್ರಕರಣ ಕುರಿತು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಿ ಕ್ರಮ ಕೈಗೊಳ್ಳುತ್ತೇವೆ. ಯಾದಗಿರಿ ಜಿಲ್ಲೆಯಾದ್ಯಂತ ದೌರ್ಜನ್ಯ ಪ್ರಕರಣಗಳು 2021- 51, ಹಾಗೂ 2024-46 ಪ್ರಕರಣ ದಾಖಲಾಗಿದ್ದು, ಪ್ರಸ್ತುತ ದೌರ್ಜನ್ಯ ಪ್ರಕರಣ 10 ತನಿಖೆಯಲ್ಲಿ ಇದೆ ಎಂದು ಅವರು ತಿಳಿಸಿದರು.

ಸರ್ಕಾರದ ಹೊಸ ಆದೇಶ ಪ್ರಸ್ತುತದಲ್ಲಿ ಇದ್ದು, ಅದನ್ನು ತಕ್ಷಣ ಪೊಲೀಸ್ ಇಲಾಖೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣವನ್ನು ಸಾರ್ವಜನಿಕರಿಗೆ ಸ್ಪಂದಿಸಲು ಕ್ರಮ ವಹಿಸುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಾದಗಿರಿ ದೌರ್ಜನ್ಯ ಸಮಿತಿ ನಾಮ ನಿರ್ದೇಶಿತರು ಮರೆಪ್ಪ ಚಟೇಕರ್, ಸುರಪುರ ದೌರ್ಜನ್ಯ ಸಮಿತಿ ನಿರ್ದೇಶಿತ ನಿಂಗಪ್ಪ ಬುಡ್ಡಾ ದೇವಳಗುಡ್ಡ, ಮಲ್ಲಪ್ಪ ಉಳಡಿಗೇರ್, ರವಿಕುಮಾರ ಯಂಕ್ಷAತೆ,  ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಎಸ್.ಎಸ್.ಚನ್ನಬಸಪ್ಪ, ಜಿಲ್ಲಾ ಪಂಚಾಯತ್ ಪಿ.ಡಿ ಲಕ್ಷಿö್ಮಕಾಂತ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿಗಳು ಜಹೀರ್ ಸುರಪುರ ತಹಸೀಲ್ದಾರ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.