ಜಿಲ್ಲೆ

ಆರೋಗ್ಯ ವಿಮೆ ಸೌಲಭ್ಯಕ್ಕೆ ಮೈಸೂರಿನಲ್ಲಿ ಪರಿಶಿಷ್ಟರಿಂದ ಪ್ರತಿಭಟನೆ

ಸದೇಶ್ ಕಾರ್ಮಾಡ್

ಮೈಸೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣನಿಧಿ ಅಡಿಯಲ್ಲಿ ನಗರ ಪಾಲಿಕೆಯು ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನಾಗರಿಕ ಹಕ್ಕು ಹೋರಾಟ ಸಮಿತಿ ವತಿಯಿಂದ ಬುಧವಾರ ನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಯಿತು.

ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವಂತೆ ಸರ್ಕಾರ ಆದೇಶಿಸಿ 4 ವರ್ಷ ಕಳೆದರೂ ಪಾಲಿಕೆ ಆದೇಶ ಜಾರಿಗೊಳಿಸಿಲ್ಲ. ಶೇ.24.10 ನಿಧಿಯ ಕುರಿತು ಅರಿವು ಮೂಡಿಸಲು ಮಾಹಿತಿ ಫಲಕ, ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಪ್ರಚಾರಗೊಳಿಸುವಂತೆ ಸರ್ಕಾರ ಆದೇಶಿಸಿದರೂ ಪಾಲಿಕೆ ಈ ನಿಟ್ಟಿನಲ್ಲಿ ಕ್ರಮ ವಹಿಸಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಿತಿ ಅಧ್ಯಕ್ಷ ಜಯಶಂಕರ ಶ್ಯಾಮ್ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆ ಬಳಿಕ ಆಯುಕ್ತರು ಹಾಗೂ ಮೇಯರ್ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು.