ಜಿಲ್ಲೆ

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಕೊಡಿ

ಅಶೋಕ್ ಕುಮಾರ್ ಎನ್

ಸಿಂಧನೂರು: ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಗತಿಸಿದ್ದು, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಕೂಡಲೇ ಪಠ್ಯಪುಸ್ತಕ ವಿತರಣೆಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ತಾಪಂ ಎಡಿ ಅಮರಗುಂಡಪ್ಪಗೆ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ಗುರುವಾರ ಮನವಿ ಸಲ್ಲಿಸಲಾಯಿತು.

ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿ ಮತ್ತು ಈ ಸಮುದಾಯದ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಗ್ರಾಪಂ ಮಟ್ಟದಲ್ಲಿ ಅನುದಾನ ಮೀಸಲಿಟ್ಟಿದೆ. ಆದರೆ, ಈ ಅನುದಾನ ಸಮುದಾಯಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಗ್ರಾಪಂಗಳಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶೇ. 25 ರ ಅನುದಾನದಲ್ಲಿ ಪಠ್ಯಪುಸ್ತಕ ವಿತರಣೆ ಮಾಡುವ ಯೋಜನೆ ಇದ್ದು ವಿದ್ಯಾರ್ಥಿಗಳು ಯೋಜನೆಯಿಂದ ವಂಚಿತಗೊಳ್ಳುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯುವಂತಾಗಿದೆ ಎಂದು ದೂರಿದರು.